ನವದೆಹಲಿ : ಇಂದು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಗುಜರಾತ್ ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ.
ಗುಜರಾತ್ ಒಟ್ಟು 182 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 143 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 27 ಕ್ಷೇತ್ರಗಳಲ್ಲಿ, ಆಪ್ ಆದ್ಮಿ ಪಕ್ಷ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 30 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಾರ್ಟಿ 1 ಕ್ಷೇತ್ರದಲ್ಲಿ, 3 ಕ್ಷೇತ್ರಗಳಲ್ಲಿ ಪಕ್ಷೇತರರು ಮುನ್ನಡೆ ಸಾಧಿಸಿದ್ದಾರೆ.