ನವದೆಹಲಿ : ಇಂದು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ಗುಜರಾತ್ ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ.
BIGG NEWS : ಡಿ.17 ರಂದು ಸ್ವಕ್ಷೇತ್ರ ಶಿಗ್ಗಾಂವಿಯ ಬಾಡದಲ್ಲಿ ಸಿಎಂ ಬೊಮ್ಮಾಯಿ `ಗ್ರಾಮವಾಸ್ತವ್ಯ’!
ಗುಜರಾತ್ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆ ಕಾರ್ಯ ಈಗಾಗಲೇ ಶುರುವಾಗಿದ್ದು, ಬಿಜೆಪಿ ಬರೋಬ್ಬರಿ 151 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ, ಆಪ್ ಆದ್ಮಿ ಪಕ್ಷ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದ ಮತ ಎಣಿಕೆ ನಡೆಯುತ್ತಿದ್ದು, ಮತಗಳ ಏಣಿಕೆಯಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. 3 ಕ್ಷೇತ್ರಗಳಲ್ಲಿ ಪಕ್ಷೇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.