ಬೆಂಗಳೂರು : ಗುಜರಾತ್ ವಿಧಾನಸಭೆ ಚುಣಾವಣೆಯ ಫಲಿತಾಂಶದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಸಲು ಆಮ್ ಆದ್ಮಿ ಪಾರ್ಟಿಗೆ ಬಿಜೆಪಿಯೇ ಫಂಡ್ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಜಾರ್ಖಂಡ್ನಲ್ಲಿ ಘೋರ ದುರಂತ: ಸರ್ಕಾರಿ ಶಾಲೆಯಲ್ಲಿ ಬಿಸಿ ಗಂಜಿಯಿಟ್ಟಿದ್ದ ಟಬ್ಗೆ ಬಿದ್ದು ಅಕ್ಕ-ತಂಗಿ ಸಾವು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿಯೇ ಆಮ್ ಆದ್ಮಿ ಪಾರ್ಟಿಗೆ ಫಂಡ್ ಮಾಡಿದೆ. ಹೀಗಾಗಿ ಗುಜರಾತ್ ನಲ್ಲಿ ಮತ ವಿಭಜನೆಯಿಂದ ಬಿಜೆಪಿ ಮುನ್ನಡೆ ಸಾಧಿಸಿದೆ ಎಂದು ಹೇಳಿದ್ದಾರೆ.
ಗುಜರಾತ್ ಚುನಾವಣೆಯ ಫಲಿತಾಂಶ ಕರ್ನಾಟಕದ ಚುನಾವಣೆಯ ಮೇಲೆ ಪರಿಣಾಮ ಬೀರಲ್ಲ. ಅಲ್ಲಿನ ವಾತವರಣವೇ ಬೇರೆ ಇಲ್ಲಿನ ವಾತವಾರಣವೇ ಬೇರೆ. ಇಲ್ಲಿನ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿರೋಧ ಪಕ್ಷವೂ ತುಂಬಾ ಸ್ಟ್ರಾಂಗ್ ಆಗಿದೆ. ಹೀಗಾಗಿ ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಇನ್ನು ಗುಜರಾತ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈವರೆಗೆ ಗುಜರಾತ್ ನಲ್ಲಿ ಬಿಜೆಪಿ ಬರೋಬ್ಬರಿ 154 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ಕೇವಲ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
BREAKING NEWS : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಅಣ್ಣ, ತಂಗಿ ಸಾವು, ಮೂವರಿಗೆ ಗಂಭೀರ ಗಾಯ