ನವದೆಹಲಿ : ಇಂದು ಗುಜರಾತ್ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಬಿಜೆಪಿ 150 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಐತಿಹಾಸಿಕ ಗೆಲುವಿನ ಕಡೆಗೆ ಬಿಜೆಪಿ ಮುಖ ಮಾಡಿದೆ.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದ್ದು, ಈಗಾಗಲೇ ಬಿಜೆಪಿ 150 ಕ್ಕು ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಭೂಪೇಂದ್ರ ಪಟೇಲ್ ಗೆ ಮುಖ್ಯಮಂತ್ರಿ ಪಟ್ಟ ಫಿಕ್ಸ್ ಆಗಿದ್ದು, ಡಿಸೆಂಬರ್ 11 ಅಥವಾ 12 ರಂದು ಪದಗ್ರಹಣ ನಡೆಯುವ ಸಾಧ್ಯತೆ ಇದೆ.
ಇನ್ನು ಗುಜರಾತ್ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಬಿಜೆಪಿ 154 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಕೇವಲ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.