ಬೆಂಗಳೂರು : ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನತ್ತ ದಾಪುಗಾಲಿಟ್ಟಿದ್ದು, ಗುಜರಾತ್ ಫಲಿತಾಂಶ ನೋಡಿ ರಾಜ್ಯದಲ್ಲಿ ಸುಮಾರು 10-12 ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಪ. ಬಂಗಾಳ: ಮಾತನಾಡುತ್ತಾ ನಿಂತಿದ್ದ ಟಿಟಿಇ ತಲೆಗೆ ತಾಗಿದ ವಿದ್ಯುತ್ ತಂತಿ… ಮುಂದೇನಾಯ್ತು ನೋಡಿ | WATCH VIDEO
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೂ ಪರಿಣಾಮ ಬೀರಲಿದ್ದು, ಫಲಿತಾಂಶ ನೋಡಿ ಕಾಂಗ್ರೆಸ್ ಪಕ್ಷದ 10-12 ಶಾಸಕರು ಬಿಜೆಪಿಗೆ ಬರಲಿದ್ದಾರೆ. ಕೆಲವು ಶಾಸಕರು ನನ್ನ ಜೊತೆಗೆ ಸಂಪರ್ಕದಲ್ಲಿದ್ದು, ಶೀಘ್ರವೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ನಾಯಕತ್ವ ಇಲ್ಲದ ಕಾಂಗ್ರೆಸ್ ಪಕ್ಷದಲ್ಲಿದ್ದರೆ ಭವಿಷ್ಯ ಏನು ಎಂಬ ಆತಂಕದಲ್ಲಿ ಕೆಲವು ಶಾಸಕರಿದ್ದಾರೆ. ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಜೊತೆಗೆ ಈಗಾಗಲೇ ಮಾತನಾಡುತ್ತಿದ್ದೇವೆ. ಬಿಜೆಪಿ ಸೇರ್ಪಡೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.
BIGG NEWS : ಗುಜರಾತ್ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೂ ಪರಿಣಾಮ ಬೀರಲಿದೆ : ಸಚಿವ ಮುರುಗೇಶ್ ನಿರಾಣಿ