ಬೆಂಗಳೂರು : ಬೆಳಗಾವಿ ಗಡಿ ವಿವಾದದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ ಸಿಎಸ್ , ಡಿಜಿಪಿ ಜೊತೆ ಮಾತನಾಡಿದ್ದೇನೆ, ಬೆಳಗಾವಿ ಜಿಲ್ಲೆಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಕೂಡ ಚರ್ಚೆ ನಡೆದಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ನನ್ನ ಜೊತೆ ಅಮಿತ್ ಶಾ ಮಾತನಾಡಿಲ್ಲ, ಅವರ ಜೊತೆ ಕೂಡ ಚರ್ಚಿಸುವೆ ಎಂದು ಹೇಳಿದರು.
ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಕುರಿತು ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದೇನೆ , ಯಾರಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ನಿಂದ ಜ.8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ‘ಐಕ್ಯತಾ ಸಮಾವೇಶ’ – ಡಾ.ಜಿ ಪರಮೇಶ್ವರ್