ವಿಜಯಪುರ : ಗುಜರಾತ್ ವಿಧಾನಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಗುಜರಾತ್ ನಲ್ಲಿ ಸ್ಪಷ್ಟ ಅದ್ವಿತೀಯ ಬಹುಮತ ಮಾತ್ರವಲ್ಲ, ಐತಿಹಾಸಿಕ ಗೆಲುವು ಸಾಧಿಸಿದೆ ಎಂದಿದ್ದಾರೆ
ಸುದ್ದಿಗಾರರೊಂದಿ ಮಾತನಾಡಿದ ಅವರು ಗುಜರಾತ್ ವಿಧಾನಸಭಾ ಚುನಾವಣೆ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ ಭವಿಷ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಗುಜರಾತ್ ನಲ್ಲಿ ಸ್ಪಷ್ಟ ಅದ್ವಿತೀಯ ಬಹುಮತ ಮಾತ್ರವಲ್ಲ ಐತಿಹಾಸಿಕ ಗೆಲುವು ಸಾಧಿಸಿದೆ. ಕೆಲವೇ ತಿಂಗಳಲ್ಲಿ ರಾಜ್ಯದಲ್ಲೂ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ.
ಪ್ರಧಾನಿ ಮೋದಿ ಅವರು ದೇಶದ ಜನತೆಗೆ ನೀಡಿರುವ ಕೊಡುಗೆ, ಗುಜರಾತ್ ನಲ್ಲಿ ಕಳೆದ ಎರಡೂವರೆ ದಶಕದಿಂದ ಮಾಡಿರುವ ಬಿಜೆಪಿ ಸರ್ಕಾರದ ಸಾಧನೆ ನಿರೀಕ್ಷೆ ಮೀರಿದ ಫಲಿತಾಂಶ ತಂದುಕೊಡುವಲ್ಲಿ ಯಶಸ್ವಿಯಾಗಿದೆ ಎಂದರು. ಹಿಮಾಚಲಪ್ರದೇಶದಲ್ಲಿ ಸ್ಥಳೀಯ ಆಡಳಿತ ವಿರೋಧಿ ಅಲೆ ಕಂಡು ಬಂದಿದೆ. ಅಲ್ಲಿ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದೇವು, ನಮ್ಮ ನಿರೀಕ್ಷೆಗೆ ತಕ್ಕಂತೆ ಅಧಿಕಾರಕ್ಕೆ ಏರುವಷ್ಟು ಸ್ಥಾನಗಳು ಸಿಕ್ಕಿಲ್ಲ ಎಂದ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿಪ್ರತಿಕ್ರಿಯಿಸಿದ್ದಾರೆ