ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಮತ್ತು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಮೈನ್ ಪುರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯ ಅವರನ್ನು 2,88,461 ಮತಗಳಿಂದ ಸೋಲಿಸುವ ಮೂಲಕ ಜಯಗಳಿಸಿದ್ದಾರೆ. ಈ ಮೂಲಕ ಅವರು ಅವರು ತಮ್ಮ ದಿವಂಗತ ಮಾವ ಮತ್ತು ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಯಾದವ್ ಹೊಂದಿದ್ದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
2019 ರಲ್ಲಿ, ಮುಲಾಯಂ ಸಿಂಗ್ ಯಾದವ್ ಅವರು ಬಿಜೆಪಿ ಅಭ್ಯರ್ಥಿ ಪ್ರೇಮ್ ಸಿಂಗ್ ಶಾಕ್ಯ ಅವರನ್ನು 94,389 ಮತಗಳಿಂದ ಸೋಲಿಸುವ ಮೂಲಕ ಮೈನ್ಪುರಿ ಕ್ಷೇತ್ರದಲ್ಲಿ ಗೆಲುವು ಕಂಡರು.