ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆ, ಗ್ರಾಮೀಣ ರಸ್ತೆ ಸಂಪರ್ಕ, ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನಲ್ಲಿ ಸುಮಾರು 75 ಕೋಟಿ ರೂಪಾಯಿಗಳ ವೆಚ್ಚದ ಎರಡು ಕಾಮಗಾರಿಗಳಿಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವರೂ ತೀರ್ಥಹಳ್ಳಿ ಶಾಸಕರೂ ಆದ ಆರಗ ಜ್ಞಾನೇಂದ್ರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯ ಸರಕಾರ ಸುಮಾರು 50 ಕೋಟಿ ರೂಪಾಯಿಗಳ ವೆಚ್ಚದ ತೀರ್ಥಹಳ್ಳಿ ತಾಲೂಕಿನ ತೂದೂರು – ಮುಂಡುವಳ್ಳಿ ಗ್ರಾಮಗಳನ್ನು ಸಂಪರ್ಕಿಸುವ, 49.87 ಕೋಟಿ ರೂಪಾಯಿಗಳ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ಪಡೆದು ಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ : ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ
ಅದೇ ರೀತಿಯಾಗಿ, ನೂತನ ಸೇತುವೆ ಯೋಜನೆಗೆ 49.87 ಕೋಟಿ ರೂಪಾಯಿಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 25.65 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಕಾರಣಗಿರಿ – ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರ ದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 24.36 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದ್ದು, ಶೀಘ್ರವಾಗಿ, ಯೋಜನೆ ಅನುಷ್ಠಾನಕ್ಕೆ ಟೆಂಡರ್ ಕರಯಲಾಗುವುದು ಎಂದು ತಿಳಿಸಿದ್ದಾರೆ.
ಶಿವಮೊಗ್ಗ: ಕುಂಸಿ- ಆನಂದಪುರ ಮಧ್ಯೆ ರೈಲ್ವೆ ಕ್ರಾಸಿಂಗ್ ಕಾಮಗಾರಿ, ನಾಳೆಯಿಂದ ಈ ಪರ್ಯಾಯ ಮಾರ್ಗ ಬಳಸಿ
ಕ್ಷೇತ್ರದ ಶಾಸಕರೂ ಹಾಗೂ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಈ ಎರಡು ಯೋಜನೆಗಳ ಮಂಜೂರಾತಿಗೆ ಬೇಡಿಕೆ ಮಂಡಿಸಿ ಪ್ರಸ್ತಾವನೆ ಸಲ್ಲಿಸಿದ್ದರು. ತೂದೂರು- ಮುಂಡುವಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಯೋಜನೆ ಕಾರ್ಯಗತ ಗೊಳಿಸಬೇಕೆಂದು ದಶಕಗಳಿಂದ ಬೇಡಿಕೆ ಇದ್ದರೂ ಇದುವರೆಗೆ ಮಾನ್ಯತೆ ದೊರೆತಿರಲಿಲ್ಲ. ಈ ಎರಡೂ ಕಾಮಗಾರಿಗಳನ್ನು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ವತಿಯಿಂದ ಕಾರ್ಯಗತ ಗೊಳಿಸಲಾಗುವುದು ಎಂದು ಹೇಳಿದರು.