ಬಳ್ಳಾರಿ : ಬಳ್ಳಾರಿಗೆ ಆಗಮಿಸಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಶ್ರೀಕೃಷ್ಣ ದೇವರಾಯ ವಿವಿ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯಪಾಲರು ಇಂದು ಸಾವಯವ ಕೃಷಿಕ ಚಿತ್ರದುರ್ಗ ಜಿಲ್ಲೆಯ ಎಸ್ ಸಿ ವೀರಭದ್ರಪ್ಪ, ಬೆಳಗಾವಿಯ ವೈದ್ಯ ಡಾ ಮಲ್ಲಿಕಾರ್ಜುನ ವಿ ಜಾಲಿ ಮತ್ತು ಬಳ್ಳಾರಿಯ ಉತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ್ದ ಶೇಷಗಿರಿರಾವ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಘಟಿಕೋತ್ಸವದಲ್ಲಿ ವಿವಿಧ ವಿಭಾಗಗಳಲ್ಲಿ 60 ಚಿನ್ನದ ಪದಕಗಳ ಪೈಕಿ ಒಟ್ಟು 48 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆಯಲಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ , ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.ಇಂದು ( ಡಿ.9) ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಲಿದ್ದು, ಈ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಲಿರುವ ರಾಜ್ಯಪಾಲರು ಹನುಮನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಧನಲಕ್ಷ್ಮಿ ನಿಮಗೆ ಒಲಿಯಲು ಪ್ರತಿ ಶುಕ್ರವಾರದ ದಿನ ಈ ಒಂದು ಕೆಲಸ ಮಾಡಿ ಸಾಕು ಲಕ್ಷ್ಮಿ ಒಲೆಯುತ್ತಾಳೆ!