ಕೊಪ್ಪಳ : ಇಂದು ( ಡಿ.9) ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ವಿದ್ಯಾದಾಸ ಬಾಬಾ ಎಂಬುವವರು ಸ್ಥಳದಲ್ಲಿ ಹೈಡ್ರಾಮಾ ನಡೆಸಿದ್ದು, ಅಧಿಕಾರಿಗಳು ಹಾಗೂ ಬಾಬಾ ನಡುವೆ ಮಾತಿನ ಚಕಮಕಿ ನಡೆಯಿತು.
ಇಂದು ಬೆ.7:40 ರ ವೇಳೆಗೆ ಆಗಮಿಸಿದ ರಾಜ್ಯಪಾಲರು ಅಂಜನೇಯನಿಗೆ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಈ ಹಿಂದೆ ಅಂಜನಾದ್ರಿಯಲ್ಲಿ ಪೂಜೆ ಸಲ್ಲಿಸುತ್ತಿದ್ದ ವಿದ್ಯಾದಾಸ ಬಾಬಾ ಅವರು ಆಗಮಿಸಿ ಪೂಜೆ ನಡೆಸಲು ಮುಂದಾದರು. ನನಗೆ ಪೂಜೆಗೆ ಅವಕಾಶ ನೀಡಿ ಎಂದು ಆಗ್ರಹಿಸಿದರು, ನಂತರ ಬಾಬಾರನ್ನು ಪೊಲೀಸರು ವಶಕ್ಕೆ ಪಡೆದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿರುವ ರಾಜ್ಯಪಾಲರು ಹನುಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. , ಈ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಈ ಬಳಿಕ ರಾಜ್ಯಪಾಲರು ಬಳ್ಳಾರಿಗೆ ತೆರಳಲಿರುವ ರಾಜ್ಯಪಾಲರು ಶ್ರೀಕೃಷ್ಣ ದೇವರಾಯ ವಿವಿ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದು, ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ , ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.
ಇಂದು ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗಿ : ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ
BIGG NEWS : ಮಹಾರಾಷ್ಟ್ರಕ್ಕೆ ಮತ್ತೆ ಬಸ್ ಸಂಚಾರ ಆರಂಭ : ನಿಟ್ಟುಸಿರು ಬಿಟ್ಟ ಪ್ರಯಾಣಿಕರು