ಮಂಗಳೂರು : ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆ ತನಿಖೆಗೆ ಭಾರೀ ಹಿನ್ನಡೆಯಾಗಿದೆ.
ಕುಕ್ಕರ್ ಬಾಂಬ್ ಸ್ಪೋಟದಿಂದ ಶಾರೀಖ್ ಮೈಗೆ ತೀವ್ರತರಹದ ಸುಟ್ಟ ಗಾಯಗಳಾಗಿದ್ದು, ವೈದ್ಯರಿಂದ ನಿರಂತರ ಚಿಕಿತ್ಸೆ ನಡೆಯುತ್ತಿದೆ. ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಬಳಿಕ ಆತನನ್ನು ಬೆಂಗಳೂರಿನ ಎನ್ ಐ ಎ ಕಚೇರಿಗೆ ಶಿಫ್ಟ್ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಮಂಗಳೂರು ಬಾಂಬ್ ಸ್ಪೋಟವನ್ನು ಎನ್ ಐ ಗೆ ವರ್ಗಾವಣೆ ಮಾಡಲಾಗಿದ್ದು, ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆಯ ಹೋಂ ಸ್ಟೇ ಒಂದಕ್ಕೆ ಆತ ಮತ್ತು ಆತನ ಜೊತೆ ಇಬ್ಬರು ಮಹಿಳೆಯರು ಸೇರಿ ಒಂದು ತಂಡವೇ ಹೋಂ ಸ್ಟೇಗೆ ಬಂದು ಹೋಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ಶಾರಿಕ್ ಉಗ್ರ ಕೃತ್ಯಕ್ಕೆ ವಿದೇಶದಿಂದ ಸಹಕಾರ ಮಾಡುತ್ತಿದ್ದವರು ಡಾಲರ್ ಮೂಲಕ ಆರ್ಥಿಕ ಸಹಾಯ ನೀಡುತ್ತಿರುವ ಬಗ್ಗೆ ಎನ್ಐಎ ಅಧಿಕಾರಿಗಳಿಗೆ ದಾಖಲೆಗಳು ಸಿಕ್ಕಿತ್ತು, ,ಸದ್ಯ ಎನ್ ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
WATCH VIDEO: ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಜೀವ ಉಳಿಸಿಕೊಂಡ ತಾಯಿ-ಮಗ, ವಿಡಿಯೋ ನೋಡಿ
BREAKING NEWS : ತಾರಕಕ್ಕೇರಿದ ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ : ಡಿ.19 ಕ್ಕೆ ‘MES’ ನಿಂದ ‘ಮಹಾಮೇಳಾವ್’ ಆಯೋಜನೆ