ಗದಗ: ಇತ್ತೀಚೆಗೆ ಗದಗದಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಹೀಗಾಗಿ ಇದನ್ನು ತಡೆಗಟ್ಟಲು ಪೊಲೀಸರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ.
BIGG NEWS: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲೂ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬರಲಿದೆ; ಪ್ರಹ್ಲಾದ್ ಜೋಶಿ ವಿಶ್ವಾಸ
ಒಂದು ವಾರದಲ್ಲಿ ಚಾಕು ಇರಿತದ ಎರಡು ಪ್ರಕರಣಗಳು ನಡೆದ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ್ ನೇತೃತ್ವದಲ್ಲಿವ ಹಲವು ಪ್ರದೇಶಗಳಲ್ಲಿ ಮನೆ – ಮನೆಗಳ ಪರಿಶೀಲನೆ ನಡೆಸಿದ್ದಾರೆ.
ಗದಗ ಶಹರ ಹಾಗೂ ಬೆಟಗೇರಿ ಠಾಣೆಯ ನೂರಾರು ಪೊಲೀಸರು, ಕಮ್ಮಾರ ಸಾಲ ಹಾಗೂ ರಂಗನವಾಡಿ ಗಲ್ಲಿಯ ಅನುಮಾನಾಸ್ಪದ ಮನೆಗಳಲ್ಲಿ ಶೋಧ ನಡೆಸಿದರು. ಕೆಲ ಮನೆಗಳಲ್ಲಿ ಚಾಕು, ಕಂದ್ಲಿಗಳು ಹಾಗೂ ರಾಡ್ ಪತ್ತೆಯಾಗಿವೆ ಎನ್ನಲಾಗಿದೆ. ಇಬ್ಬರು ಸಿಪಿಐ, ಪಿಎಸ್ಐ ಸೇರಿದಂತೆ ಹಲವು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಇದ್ದಾರೆ.