ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಇಂದು ಗಾಂಧಿನಗರದ ರಾಜಭವನಕ್ಕೆ ಆಗಮಿಸಿ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಇದೆ ವೇಳೆ ಬಿಜೆಪಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ತನ್ನ ಪಕ್ಷದ ಪ್ರಧಾನ ಕಚೇರಿ ಕಮಲಂನಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ನೂತನ ಸರ್ಕಾರ ರಚನೆಗೆ ಪಕ್ಷದ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರು ನಾಳೆ ಮಧ್ಯಾಹ್ನ 2 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಸಮಯಾವಕಾಶ ಕೋರಿದ್ದಾರೆ ಎನ್ನಲಾಗುತ್ತಿದೆ.
ಗುಜರಾತ್ ಹೊಸ ಸಚಿವ ಸಂಪುಟ ಡಿಸೆಂಬರ್ 12 ರಂದು ಮುಖ್ಯಮಂತ್ರಿಯೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರಲ್ಲಿ ಹನ್ನೆರಡುಕ್ಕೂ ಹೆಚ್ಚು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಗುಜರಾತ್ನಲ್ಲಿ ಐತಿಹಾಸಿಕ ಜನಾದೇಶವನ್ನು ಪಡೆದುಕೊಂಡಿರುವ ಬಿಜೆಪಿ ಗುರುವಾರ ರಾಜ್ಯದ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಮುಂದುವರಿಯಲಿದ್ದು, ಡಿಸೆಂಬರ್ 12 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ತಿಳಿಸಿದ್ದಾರೆ.
ಮೊದಲು ಹಣ ಅಥವಾ ಮದುವೆ? ಹೆಚ್ಚಿನ ಯುವ ಭಾರತೀಯರು ಬಯಸುವುದು ಏನನ್ನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
BIG NEWS: ಮಾರ್ಚ್ 2023ರವರೆಗೆ ‘ರಾಜ್ಯ ಸಾರಿಗೆ ಸಂಸ್ಥೆ’ಗಳ ‘ಅಧ್ಯಯನ ಸಮಿತಿ’ ಅವಧಿ ವಿಸ್ತರಿಸಿ ಸರ್ಕಾರ ಆದೇಶ