ತುಮಕೂರು: ಇತ್ತೀಚೆಗೆ ಬಿಜೆಪಿ ಕೈಗೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
BIG NEWS: ಮಾರ್ಚ್ 2023ರವರೆಗೆ ‘ರಾಜ್ಯ ಸಾರಿಗೆ ಸಂಸ್ಥೆ’ಗಳ ‘ಅಧ್ಯಯನ ಸಮಿತಿ’ ಅವಧಿ ವಿಸ್ತರಿಸಿ ಸರ್ಕಾರ ಆದೇಶ
ಈ ಕುರಿತು ಕಿಡಿಗೇಡಿಗಳ ವಿರುದ್ಧ ಕೊರಟಗೆರೆ ಬಿಜೆಪಿ ಮಂಡಲ ಅಧ್ಯಕ್ಷ ಪವನ್ ಕುಮಾರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದ ಜನಸಂಕಲ್ಪ ಯಾತ್ರೆಯಲ್ಲಿನ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ‘ಸಾರ್ವಜನಿಕ ಸೇವಾ ಬಳಗ’ ಎಂಬ ವಾಟ್ಸಾಪ್ ಗ್ರೂಪ್ ಹಾಗೂ ಡಾ.ಜಿ.ಪರಮೇಶ್ವರ್ ಕೊರಟಗೆರೆ ಎಂಬ ಫೇಸ್ಬುಕ್ ಪೇಜ್ ಸೇರಿ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸಿಎಂ ಬೊಮ್ಮಾಯಿ ಅವರು ಭಾಷಣದ ವೇಳೆ, ಕಾಂಗ್ರೆಸ್ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ನವರೇ ಸೋಲಿಸುತ್ತಾರೆ ಎಂದಿದ್ದರು. ಈ ಹೇಳಿಕೆಯನ್ನು ‘ಪರಮೇಶ್ವರ್ಗೆ ಅತಿ ಹೆಚ್ಚು ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಎಂದು ಕರೆ ನೀಡಲು ಬಂದಿದ್ದೇನೆ ಎಂದಿದ್ದಾರೆ.