ಬೆಂಗಳೂರು : ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಕರಡು ಅಧಿಸೂಚನೆ ಪ್ರಕಟಿಸಿದ್ದು, ವೇಳಾಶಪಟ್ಟಿಗೆ ಪೂರ್ವಭಾವಿಯಾಗಿ ಅಧಿಕಾರಿಗಳು ಕೈಗೊಳ್ಳಬೇಕಾದ ಕರ್ತವ್ಯಗಳ ಬಗ್ಗೆ ಸೂಚನೆ ನೀಡಿದೆ.
BIGG NEWS : ಗಂಗರ ಇತಿಹಾಸ ಅರಿಯಲು ಸಂಶೋಧನಾ ಪ್ರಾಧಿಕಾರ ರಚನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯೋಪಾದಯರು, ಶಿಕ್ಷಕರು, ಪ್ರೌಢಶಾಲಾ ಮುಖ್ಯಶಿಕ್ಷಕರು, ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಹಂತ, ವಿಬಾಗೀಯ ಹಂತ, ಅಂತರವಿಭಾಗೀಯ ಹಂತದಲ್ಲಿ ಅಧಿಕಾರಿಗಳು ಯಾವ್ಯಾವ ಸಿದ್ದತೆ ಮಾಡಿಕೊಳ್ಳಬೇಕು ಎಂದುಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವರ್ಗಾವಣೆಯ ವಿವಿಧ ಹಂತಗಳ ವೇಳಾಪಟ್ಟಿಯನ್ನೂ ನೀಡಲಾಗಿದ್ದು, ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ. ಮಂಜೂರಾದ ಹುದ್ದೆಗಳಿಗಿಂತ ಹೆಚ್ಚು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದರೆ ಅಧಿಕಾರಿಗಳು ಕ್ರಮ ಕೈಗೊಂಡು ಪಟ್ಟಿ ಸಿದ್ದಪಡಿಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.