ತರ್ನ್ ತರಣ್: ತರ್ನ್ ತರಣ್ ಜಿಲ್ಲೆಯ ವ್ಯಾಪ್ತಿಯ ಸರ್ಹಾಲಿ ಪೊಲೀಸ್ ಠಾಣೆಯ ಮೇಲೆ ರಾಕೆಟ್ ಲಾಂಚರ್ ನಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.
ಸ್ಥಳೀಯ ಮಾಧ್ಯಮಗಳ ಮಾಹಿತಿಯ ಪ್ರಕಾರ, ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಅಮೃತಸರ-ಬಟಿಂಡಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆಯ ಮೇಲೆ ರಾಕೆಟ್ ಲಾಂಚರ್ ನಿಂದ ದಾಳಿ ನಡೆಸಲಾಗಿದೆ. ದಾಳಿಯ ಸಮಯದಲ್ಲಿ, ಕರ್ತವ್ಯ ಅಧಿಕಾರಿ ಸೇರಿದಂತೆ ಇತರ ಕೆಲವು ಪೊಲೀಸ್ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ಹಾಜರಿದ್ದರು, ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ.
ದಾಳಿಯ ನಂತರ ಜಿಲ್ಲೆಯ ಎಸ್.ಎಸ್.ಪಿ. ಗುರ್ಮೀತ್ ಸಿಂಗ್ ಚೌಹಾಣ್ ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಪೊಲೀಸ್ ಠಾಣೆಯನ್ನು ಸುತ್ತುವರಿದು ಪ್ರದೇಶವನ್ನು ಸೀಲ್ಡೌನ್ ಮಾಡಿದರು. ಇದು ಭಯೋತ್ಪಾದಕ ದಾಳಿ ಎಂದು ನಿರೀಕ್ಷಿಸಲಾಗಿದೆ, ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಹಿರಿಯ ಅಧಿಕಾರಿಗಳು ನೀಡಿಲ್ಲ.