ಬೆಂಗಳೂರು: ನಗರದಲ್ಲಿ ಆಂಧ್ರದ ರೌಡಿಶೀಟರ್ ಶಿವಶಂಕರ್ ರೆಡ್ಡಿ ಸೇರಿದಂತೆ ಇಬ್ಬರ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
BIGG NEWS: ಮಂಗಳೂರಿನಲ್ಲಿ ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬ ಸಮೇತ ಶಿವರಾಜ್ ಕುಮಾರ್ ಭೇಟಿ
ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಶಿವಶಂಕರ್ ರೆಡ್ಡಿ ಮತ್ತು ಡ್ರೈವರ್ ಅಶೋಕ್ ರೆಡ್ಡಿ ಮೇಲೆ ಡಿಸೆಂಬರ್ 8ರಂದು ಗುಂಡಿನ ದಾಳಿ ನಡೆದಿತ್ತು.ಈ ಘಟನೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಆರ್.ಪುರಂ ಠಾಣಾ ಪೊಲೀಸರು, ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚನೆ ಮಾಡಿದ್ದರು.
BIGG NEWS: ಮಂಗಳೂರಿನಲ್ಲಿ ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬ ಸಮೇತ ಶಿವರಾಜ್ ಕುಮಾರ್ ಭೇಟಿ
ಅದರಂತೆ ತನಿಖೆ ಆರಂಭಿಸಿದ ಪೊಲೀಸರು ಹೈವೆ ರಸ್ತೆಯಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಹೊಸಕೋಟೆಯಿಂದ ಆಂಧ್ರಪ್ರದೇಶಕ್ಕೆ ತೆರಳಿರುವುದು ತಿಳಿದುಬಂದಿದೆ. ಮಾಹಿತಿ ಅನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಹಳೆ ದ್ವೇಷದ ಹಿನ್ನಲೆ ಶಿವಶಂಕರ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿರುವುದು ತಿಳಿದುಬಂದಿದೆ.