ಬೆಂಗಳೂರು: ವಿವಿಧ ಯೋಜನೆಗಳಲ್ಲಿ ಕೋಟ್ಯಾಂತರ ರೂಪಾಯಿ ಗೋಲ್ಮಾಲ್ ನಡೆದಿದೆ ಎನ್ನುವ ಆರೋಪ ಬಂದ ಹಿನ್ನಲೆಯಲ್ಲಿ, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್ ಬಳಿ ಇರುವಂತ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿಯ ಮೇಲ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯದ ಜನತೆಗೆ ಗುಡ್ ನ್ಯೂಸ್: ಸೌರ ಗೃಹ ಯೋಜನೆಗೆ ಚಾಲನೆ ನೀಡಿದ ಬೆಸ್ಕಾಂ | BESCOM Rooftop Solar Scheme
ಕಾರ್ಮಿಕ ಮಂಡಳಿ ಕಚೇರಿಯಲ್ಲಿ ಕೋಟ್ಯಾಂತರ ರೂಪಾಯಿ ಗೋಲ್ಮಾಲ್ ನಡೆದಿದೆ ಎಂಬುದಾಗಿ ಲೋಕಾಯುಕ್ತಕ್ಕೆ ಸಾರ್ವಜನಿಕರಿಂದ ದೂರು ಬಂದಿದ್ದವು. ಈ ಹಿನ್ನಲೆಯಲ್ಲಿ ಇಂದು ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ರೆಡ್ಡಿ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ.
ಕಾರ್ಮಿಕ ಮಂಡಳಿಯ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಲವು ಯೋಜನೆಗಳಿಗೆ ಸಂಬಂಧಿಸಿದ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಅಕ್ರಮಗಳ ಬಗ್ಗೆ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.