ಮಂಗಳೂರು: ನಗರದಲ್ಲಿ ದಿನೇ ದಿನೇ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ರೇ ಇಂತಹ ಯಾವುದೇ ಕಾನೂನು ಕೈಗೆತ್ತಿಕೊಳ್ಳಬಾರದು. ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದಂತ ಅವರು, ಜಿಲ್ಲೆಯಲ್ಲಿನ ನೈತಿಕ ಪೊಲೀಸ್ ಗಿರಿಯ ಬಗ್ಗೆ ಪೊಲೀಸರು ಪರಿಶೀಲನ ನಡೆಸುತ್ತಿದ್ದಾರೆ. ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ. ಯಾರೂ ಪ್ರಚೋದನೆ ಮಾಡಬಾರದು. ಶಾಂತಿ ಕಾಪಾಡಬೇಕು. ಜಿಲ್ಲೆಯಲ್ಲಿ ಒಂದೆರಡು ಕಡೆ ಬಿಟ್ಟರೇ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದರು.
ಬೆಳಗಾವಿ ಗಡಿ ವಿಚಾರವಾಗಿ ಮಹಾಜನ್ ವರದಿಯೇ ಅಂತಿಮ – ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್