ಬೆಂಗಳೂರು: ಇತ್ತೀಚೆಗೆ ಚಂದನವನದಲ್ಲಿ ಕೆಲ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚೆಗೆ ನಟಿ ಅದಿತಿ ಪ್ರಭುದೇವ್ ಮದುವೆ ಆಗಿತ್ತು.
BIGG NEWS: ಮುಂಬರುವ ಚುನಾವಣೆಯಲ್ಲಿ ವೋಟ್ ಹಾಕದ್ದಿದ್ದರೆ ಯುಜಿಡಿ ಕಾಮಗಾರಿ ಮಾಡಲ್ಲ; ಪ್ರೀತಂಗೌಡ ಎಚ್ಚರಿಕೆ
ಇದೀಗ ರೆಬಲ್ ಸ್ಟಾರ್ ಅಂಬರೀಶ್ ಪುತ್ರ ನಟ ಅಭಿಷೇಕ್ ಅಂಬರೀಶ್ ಸರದಿ ಆಗಿದೆ. ಇಂದು ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ನೆರೆವೇರಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಈ ಶುಭ ಕಾರ್ಯ ನಡೆದಿದೆ. ಎರಡೂ ಕುಟುಂಬದ ಸದಸ್ಯರು ಹಾಗೂ ಕೆಲವೇ ಕೆಲವು ಮಂದಿ ಆಪ್ತರು ಮಾತ್ರ ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಜೊತೆಯಾಗಿರುವ ಮೊದಲ ಫೋಟೋ ಲಭ್ಯವಾಗಿದೆ. ಎಂಗೇಜ್ಮೆಂಟ್ ಬಳಿಕ ಈ ಜೋಡಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.