ಬೆಂಗಳೂರು: ಇನ್ನೇನು ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ.
RAIN ALEART: , ಕರ್ನಾಟಕ ಸೇರಿದಂತೆ ಡಿಸೆಂಬರ್ 13 ರವರೆಗೆ ಈ ರಾಜ್ಯಗಳಲ್ಲಿ ಭಾರೀ ಐಎಂಡಿ ಎಚ್ಚರಿಕೆ
ದೆಹಲಿಗೆ ಬರುವಂತೆ ಸೂಚನೆ ಬಂದಿದ್ದು, ನಾಳೆ ತೆರಳಲಿದ್ದಾರೆ.ಪ್ರತಿಪಕ್ಷ ನಾಯುಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾ ರೆಡ್ಡಿ, ಧ್ರುವ ನಾರಾಯಣ್ ಮತ್ತಿತರರು ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಲಿದ್ದಾರೆ.
ಚುನಾವಣೆಗೆ ರಣತಂತ್ರ ರೂಪಿಸುವ ಕುರಿತು ರಾಜ್ಯ ನಾಯಕರ ಜತೆ ಮಹತ್ವದ ಮಾತುಕತೆ ನಡೆಸಲಿರುವ ಹೈಕಮಾಂಡ್, ಅಭ್ಯರ್ಥಿಗಳ ಆಯ್ಕೆ ವಿಚಾರ, ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಿದ್ದಾರೆ.