ಬೆಂಗಳೂರು : ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾರವರಣವಿದ್ದು, ಡಿ.13 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಡಿಸೆಂಬರ್ 13 ರವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
BIGG NEWS: ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ; ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
ರಾಜ್ಯದ ಪ್ರತಿ ಪ್ರದೇಶದಲ್ಲಿ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪನೆ – ಸಿಎಂ ಬಸವರಾಜ ಬೊಮ್ಮಾಯಿ