ಬೆಂಗಳೂರು : ರಾಜ್ಯದಲ್ಲಿ ಮೌಂಡೌಸ್ ಚಂಡಮಾರುತದ ಹಿನ್ನೆಲೆ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ( heavy Rain ) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯಾದ್ಯಂತ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸೈಕ್ಲೋನ್ ಕಾರಣದಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆಯ ಜೊತೆಗೆ, ಚಳಿ ಕೂಡ ಜನರನ್ನು ನಡುಗಿಸಿದೆ. ಈ ನಡುವೆಯೂ ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ವಿಧಾನಸೌಧ, ಕಾರ್ಪೋರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ಕೆ ಆರ್ ಮಾರ್ಕೇಟ್, ಶಾಂತಿನಗರ, ಲಾಲ್ ಬಾಗ್, ಬನಶಂಕರಿ, ಮಲ್ಲೇಶ್ವರಂ, ಜೆಪಿ ನಗರ ಸೇರಿದಂತೆ ಹಲವೆಡೆ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಈ ನಡುವೆಯೂ ಮತ್ತೆ ಮೂರು ದಿನ ಮಳೆಯಾಗಲಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ತಜ್ಞ ಆರ್ ಪ್ರಸಾದ್ ಅವರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಿನ್ನೆ ಹೆಚ್ಚು ಮಳೆಯಾಗಿದೆ. ಕೋಲಾರದಲ್ಲಿ 8 ಸೆಂ.ಮೀ ಹಾಗೂ ಚಿಕ್ಕಬಳ್ಳಾಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ. ದಾವಣಗೆರೆಯಲ್ಲಿ ನಿನ್ನೆ 13 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದಿದ್ದಾರೆ.
BIGG NEWS : ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಹಣ ಹಂಚಿದ ‘ಜೆಡಿಎಸ್’..!
ಪೊಲೀಸರಿಂದಲೇ ದಂಪತಿಗಳ ದರೋಡೆ: ಈ ಅನುಚಿತ ವರ್ತನೆ ಸಹಿಸುವುದಿಲ್ಲ – ಬೆಂಗಳೂರು ನಗರ ಆಯುಕ್ತರ ಖಡಕ್ ಎಚ್ಚರಿಕೆ