ಧಾರವಾಡ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಧಾರವಾಡದ ಜೆಎಸ್ಎಸ್ ಆವರಣದಲ್ಲಿ ಡಿಸೆಂಬರ್ 18 ರಂದು ಉದ್ಯೋಗ ಮೇಳ ಆಯೋಜನೆ ಮಾಡಿದೆ.
ಉದ್ಯೋಗ ಮೇಳದಲ್ಲಿ ಅಂದಾಜು 70 ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿದ್ದು, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಎಸ್. ಎಸ್. ಎಲ್. ಸಿ ಅನುತ್ತೀರ್ಣ ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ, ಬಿಎ, ಬಿಕಾಂ ಇನ್ನಿತರ ಪದವಿ ಮತ್ತು ಸ್ನಾತಕೋತರ ಪದವಿ ಪಾಸಾದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು https://skillconnect.kaushalkar.com/employereg ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
BREAKING NEWS : ಇಬ್ಬರನ್ನು ಬಲಿ ಪಡೆದಿದ್ದ ಮೂಡಿಗೆರೆ ಪುಂಡಾನೆ ‘ಭೈರ’ ಕೊನೆಗೂ ಸೆರೆ