ಬೆಂಗಳೂರು: ನಗರದಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ( BJP Government ) ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ಧರಾಮಯ್ಯ ( Former CM Siddaramaiah ) ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ @BJP4Karnataka ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ.
ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ @BSBommai ಅವರನ್ನು ಒತ್ತಾಯಿಸುತ್ತೇನೆ.
1/4#SocialJustice— Siddaramaiah (@siddaramaiah) December 11, 2022
ಈ ಕುರಿತಂತೆ ಸರಣಿ ಟ್ವಿಟ್ ( Twitter ) ಮಾಡಿರುವಂತ ಅವರು, ರಾಜ್ಯ ಬಿಜೆಪಿ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಹೇಳಿದ್ದಾರೆ.
ರಾಜ್ಯ @BJP4Karnataka ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು.
2/4#SocialJustice— Siddaramaiah (@siddaramaiah) December 11, 2022
ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ @BJP4Karnataka ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ.
3/4#SocialJustice— Siddaramaiah (@siddaramaiah) December 11, 2022
ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಪಕ್ಷ ( Congress Party ) ಬದ್ಧವಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ವರದಿಯನ್ನು ಒಪ್ಪಿಕೊಂಡು ಅದನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ( Central Government ) ಶಿಫಾರಸು ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ @INCKarnataka ಪಕ್ಷ ಬದ್ಧವಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ವರದಿಯನ್ನು ಒಪ್ಪಿಕೊಂಡು ಅದನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು.
4/4#SocialJustice— Siddaramaiah (@siddaramaiah) December 11, 2022