ಮೈಸೂರು: ನಾನು ಪಕ್ಷ ಸೂಚಿಸಿದರೇ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ವಿರುದ್ಧ ಸ್ಪರ್ಧಿಸಲು ಸಿದ್ಧನಿದ್ದೇನೆ. ನರೇಂದ್ರ ಮೋದಿ ಎಂಬುದು ಕೇವಲ ಅಲೆಯಲ್ಲ. ಅದೊಂದು ಸುನಾಮಿ ಎಂಬುದಾಗಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವರುಣಾ ಕ್ಷೇತ್ರದಿಂದ ಸಿದ್ಧರಾಮಯ್ಯ ಸ್ಪರ್ಧಿಸಿದ್ರೇ, ಬಿಜೆಪಿ ಪಕ್ಷದಿಂದ ಸೂಚಿಸಿದರೇ ನಾನು ಅವರ ವಿರುದ್ಧ ಕಣಕ್ಕೆ ಇಳಿಯಲು ಸಿದ್ಧನಿದ್ದೇನೆ ಎಂಬುದಾಗಿ ತಿಳಿಸಿದರು.
ನಾನು ಕೇವಲ ವರುಣಾ ಕ್ಷೇತ್ರ ಮಾತ್ರವಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಘಟನೆ ಮಾಡುತ್ತಿದ್ದೇನೆ. ನಾವು ಹಳೆಯ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲುವಿಗಾಗಿ ಹೋರಾಟ ಮಾಡುತ್ತಿದ್ದೇವೆ. ಇಲ್ಲಿ ಪಕ್ಷ ಸಂಘಟನೆಗೂ ಕೆಲಸ ಮಾಡುತ್ತಿರೋದಾಗಿ ಹೇಳಿದರು.
BREAKING NEWS : ‘ಮಾಂಡೌಸ್’ ಚಂಡಮಾರುತ ಎಫೆಕ್ಟ್ : ಕೋಲಾರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ