ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ‘ಪೊಲೀಸರೇ ನನ್ನನ್ನು ಸಾಯಿಸ್ತಾರೆ, ದಯವಿಟ್ಟು ನ್ಯಾಯ ಕೊಡ್ಸಿ’ : ಯುವಕನ ಫೇಸ್ ಬುಕ್ ಪೋಸ್ಟ್ ವೈರಲ್
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಬೆಳ್ಳೂರು ಕ್ರಾಸ್ನಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಮತ್ತು ಹಾಸನದಿಂದ ಬೆಂಗಳೂರು ಕಡೆ ಬರುತ್ತಿದ್ದ ಸ್ವಿಫ್ಟ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಬಿಂಡಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.