ಬೆಂಗಳೂರು: ಶಾಲಾ ಮಕ್ಕಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಆಕಾಶವಾಣಿಯಲ್ಲಿ ಇಂದಿನಿಂದ ಬಾನ್ ದನಿ ರೇಡಿಯೋ ಕಾರ್ಯಕ್ರಮದಲ್ಲಿ ಪಾಠ ಪ್ರಸಾರ ಮಾಡಲಾಗುತ್ತಿದೆ. 2022-23ನೇ ಸಾಲಿನ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಡಿಎಸ್ಇ ಆರ್ ಟಿ ಪ್ರಕಟಿಸಿದೆ.
ಈ ಕುರಿತಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( Department of State Educational Research and Training – DSERT ) ಮಾಹಿತಿ ಬಿಡುಗಡೆ ಮಾಡಿದೆ.2022-23ನೇ ಸಾಲಿಗೆ ಬಾನ್ ದನಿ ರೇಡಿಯೋ ಕಾರ್ಯಕ್ರಮದ ಪಾಠ ಪ್ರಸಾರದ ವೇಳಾಪಟ್ಟಿ ದಿನಾಂಕ 12-12-2022 ರ ಸೋಮವಾರದಿಂದ ಗುರುವಾರದವೆರೆಗೆ ಮಧ್ಯಾಹ್ನ 2.35 ರಿಂದ 3 ಗಂಟೆಯವರೆಗೆ ಈ ಕೆಳಗಿನಂತೆ ಪ್ರಸಾರವಾಗಲಿದೆ.
Rain In Karnataka : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಗುಣಾತ್ಮಕ ಶಿಕ್ಷಣದ ಗುರಿ ಸಾಧನೆಯೊಂದಿಗೆ ಡಿಜಿಟಲ್ ಉಪಕ್ರಮದ ಅಳವಡಿಕೆ ಹಾಗೂ ತರಗತಿ ಬೋಧನಾ-ಕಲಿಕಾ ಪ್ರಕ್ರಿಯೆಯಲ್ಲಿ ಏಕತಾನತೆಯನ್ನು ಹೋಗಲಾಡಿಸುವ ಉದ್ದೇಶದಿಂದ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಆಕಾಶವಾಣಿಯ ಮೂಲಕ ಬಾನ್ ದನಿ ಕಾರ್ಯಕ್ರಮದಡಿ ಶಾಲೆಗಳಲ್ಲಿ ರೇಡಿಯೋ ಪಾಠಗಳನ್ನು ಡಿಸೆಂಬರ್-2022ರ ಮಾಹೆಯಿಂದ ಪ್ರಸಾರ ಮಾಡಲಾಗುತ್ತಿದೆ. ಬಾನ್ ದನಿ ಕಾರ್ಯಕ್ರಮವು 1 ರಿಂದ 9ನೇ ತರಗತಿಗಳಿಗೆ ನೀತಿ ಕತೆ, ಯೋಗ ಮತ್ತು ಆರೋಗ್ಯ ಶಿಕ್ಷಣ, ವೃತ್ತಿ ಶಿಕ್ಷಣ ಮತ್ತು ಶೈಕ್ಷಣಿಕ ಮಾರ್ಗದರ್ಶನ ಹಾಗೂ ಇಂಗ್ಲಿಷ್ ಕಲಿಕೆಯನ್ನೊಳಗೊಂಡ ಸಾಮಾನ್ಯ ಪಾಠಗಳು ಮತ್ತು 4 ಹಾಗೂ 5 ನೇ ತರಗತಿಗಳಿಗೆ ಕನ್ನಡ ಮತ್ತು ಗಣಿತ ವಿಷಯಗಳ ಕಲಿವಿನ ಫಲ ಆಧಾರಿತ ಪಾಠಗಳನ್ನು ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಆಕಾಶವಾಣಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಧ್ಯಾಹ್ನ 2.35 ರಿಂದ 3.00 ಗಂಟೆಯವರೆಗೆ ಪ್ರಸಾರಗೊಳ್ಳಲಿವೆ.