ಬೆಂಗಳೂರು : ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 7.5 ಲಕ್ಷದಿಂದ 15 ಲಕ್ಷ ರೂ.ಗೆ ಹೆಚ್ಚಳ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
BIG NEW : ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ʻಭೂಪೇಂದ್ರ ಪಟೇಲ್ʼ ಪ್ರಮಾಣ ವಚನ ಸ್ವೀಕಾರ |Bhupendra Patel
ಹಾಸನ ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದದು, ಮಾನವ ಜೀವ ಹಾನಿಗೆ 15 ಲಕ್ಷ ರೂ. ಪರಿಹಾರ, ಶಾಶ್ವತ ಅಂಗವಿಕಲತೆಗೆ ನೀಡುವ ಪರಿಹಾರವನ್ನು 2.5 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ, ಗಾಯಗೊಂಡವರಿಗೆ ನೀಡುವ ಪರಿಹಾರ ಮೊತ್ತವನ್ನು 30 ಸಾವಿರದಿಂದ 60 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.
ಆಸ್ತಿ ಹಾನಿಗೆ ಪರಿಹಾರ ಮೊತ್ತ 10 ಸಾವಿರ ರೂ.ಗಳಿಂದ 20 ಸಾವಿರ ರೂ. ಹೆಚ್ಚಳ ಹಾಗೂ ಜೀವ ಹಾನಿ, ಶಾಶ್ವತ ಅಂಗವಿಕಲತೆ ಪ್ರಕರಣಗಳಿಗೆ ನೀಡುವ ಕುಟುಂಬ ಮಾಸಾಶನ ಮೊತ್ತ ಮಾಸಿಕ 2,000 ರೂ.ಗಳಿಂದ 4,000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನು ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ.