ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಿಟ್ಟುಬಿಡದೇ ತುಂತುರು ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದಲ್ಲಿ ಚಳಿಯ ಜೊತೆಗೆ ಮಳೆಯಾಗುತ್ತಿದ್ದು, ಮೈ ನಡುಗುವ ಚಳಿಯಿಂದಾಗಿ ಜನರು ತತ್ತರಿಸಿದ್ದಾರೆ. ಬೆಂಗಳೂರು, ತುಮಕೂರು, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ತುಂತುರು ಮಳೆಯಾಗುತ್ತಿದ್ದು, ಜನಜೀವನ ಅಸ್ತವಸ್ಥಗೊಂಡಿದೆ. ಕಳೆದ 2-3 ದಿನಗಳಿಂದ ಎಡೆಬಿಡದೇ ತುಂತುರು ಮಳೆ ಸುರಿಯುತ್ತಿದೆ. ಜೊತೆಗೆ ಚಳಿಯೂ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ನಗರದಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದೂ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.