ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಚಳಿ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಶನಿವಾರದಿಂದ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ನಿರಂತರಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
Viral video : ನನ್ನ ಸೊಸೆ ಆಗುವವಳಿಗೆ 2 ಎಕರೆ ಅಡಿಕೆ ತೋಟ ಬರೆದುಕೊಡುವೆ : ಕುಣಿಗಲ್ ರೈತನಿಂದ ಬಿಗ್ ಆಫರ್!