ಬೆಂಗಳೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗಾಗಿ ಹೊಲೆಯ ಮತ್ತು ಮಾದಿಗ ಸಂಬಂಧಿಸಿದ ಜಾತಿಗಳು ಒಟ್ಟಾಗಿ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವಿಟ್ ವಿವಾದಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಅವರ ಟ್ವಿಟ್ ಬಗ್ಗೆ ಕಿಡಿಕಾರಿ ಟಾಂಗ್ ಕೊಟ್ಟಿರುವ ರಾಜ್ಯ ಬಿಜೆಪಿ ಘಟಕ ಸಿದ್ದರಾಮಯ್ಯ ರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ ಅಂತ ಕಾಲೆಳೆಇದೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ ಅವರು ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ಈಗ ಸಿದ್ದರಾಮಯ್ಯ ನವರು ಮತ್ತೆ ದಲಿತರಿಗೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದು, ದಲಿತರ ಮೂಗಿಗೆ ತುಪ್ಪ ಸವರುವ ನಿಮ್ಮ ಸುಳ್ಳು ಭರವಸೆಯನ್ನು ಯಾವ ದಲಿತರು ನಂಬುವ ಸ್ಥಿತಿಯಲ್ಲಿಲ್ಲ.