ವಿಜಯಪುರ: ಜಿಲ್ಲೆಯ ತಾಲೂಕಿನ ಅತಾಲಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ನಡು ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಕೊಲೆ ಮಾಡಿರುವ ಘಟನೆ ನಡೆದಿದೆ.
BIGG NEWS: ಕೊಪ್ಪಳದಲ್ಲಿ ಹುಚ್ಚುನಾಯಿಗಳ ಹಾವಳಿ; ಒಂದೇ ದಿನ ಮಕ್ಕಳು ಸೇರಿದಂತೆ 10 ಮಂದಿಗೆ ಕಡಿದ ನಾಯಿ
ರಾಜು ಗರುಡ್ಕರ ಹತ್ಯೆಯಾದ ವ್ಯಕ್ತಿ. ಆತ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಾಕಾಸ್ತ್ರದಿಂದ ಹೊಡೆದು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ.ಕೂಡಲೇ ರಾಜು ಬಿದ್ದ ಪ್ರಾಣ ಕಳೆದುಕೊಂಡಿದ್ದಾನೆ. ಆದರೆ ಹತ್ಯೆಗೆ ನಿಖರವಾದ ಕಾರಣವೆನೆಂಬುದು ತಿಳಿದುಬಂದಿಲ್ಲ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.