ನವದೆಹಲಿ: ಬಾಂಬೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ(Dipankar Datta) ಅವರು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಮೂರ್ತಿ ದತ್ತಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.
ಕೇಂದ್ರ ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆಯು ಭಾನುವಾರ ನ್ಯಾಯಮೂರ್ತಿ ದತ್ತಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವ ಅಧಿಸೂಚನೆಯನ್ನು ಪ್ರಕಟಿಸಿತ್ತು.
ಫೆಬ್ರವರಿ 9, 1965 ರಂದು ಜನಿಸಿದ ನ್ಯಾಯಮೂರ್ತಿ ದತ್ತಾ ಅವರು, ಸುಪ್ರೀಂ ಕೋರ್ಟ್ನಲ್ಲಿ ಫೆಬ್ರವರಿ 8, 2030 ರವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.
Punjab National Bank: ʻಪಂಜಾಬ್ ನ್ಯಾಷನಲ್ ಬ್ಯಾಂಕ್ʼ ಗ್ರಾಹಕರ ಗಮನಕ್ಕೆ: KYC ಅಪ್ಡೇಟ್ ಮಾಡಲು ಇಂದೇ ಕೊನೆ ದಿನ
BIGG NEWS: ಬಿಬಿಎಂಟಿ ವಿಭಾಗದಲ್ಲಿ ಭ್ರಷ್ಟಾಚಾರ; 10 ಅಧಿಕಾರಿಗಳ ಅಮಾನತು
Punjab National Bank: ʻಪಂಜಾಬ್ ನ್ಯಾಷನಲ್ ಬ್ಯಾಂಕ್ʼ ಗ್ರಾಹಕರ ಗಮನಕ್ಕೆ: KYC ಅಪ್ಡೇಟ್ ಮಾಡಲು ಇಂದೇ ಕೊನೆ ದಿನ
BIGG NEWS: ಬಿಬಿಎಂಟಿ ವಿಭಾಗದಲ್ಲಿ ಭ್ರಷ್ಟಾಚಾರ; 10 ಅಧಿಕಾರಿಗಳ ಅಮಾನತು