ಶಿವಮೊಗ್ಗ : ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕಂಬ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 14/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು( Power Cut ), ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ( MESCOM ) ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ- ಅವಧಿ ವಿಸ್ತರಣೆ
ಶಿವಮೊಗ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2022-23ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಕಲ್ಪಿಸಲು ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿ. 22 ರವರೆಗೆ ವಿಸ್ತರಿಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿ ಸಲ್ಲಿಸಲು ವೆಬ್ಸೈಟ್ https://shp.karnataka.gov.in ಚಿಟಿಜ https://bcwd.karantaka.gov.in ಗಳನ್ನು ಬಳಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 8050770006/28182-222129/080-35254757 ನ್ನು ಸಂಪರ್ಕಿಸುವುದು.