ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಶೈಕ್ಷಣಿಕ ಸಾಲಿಗೆ ನವೀಕರಣ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ನವೀಕರಣ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ www.ssp.karnataka.gov.in ಇಲ್ಲಿ ಅವಕಾಶ ಕಲ್ಪಿಸಿದ್ದು ಅರ್ಹ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಎಸ್ಎಟಿಎಸ್ (ಸ್ಟುಡೆಂಟ್ ಅಚೀವ್ಮೆಂಟ್ ಟ್ರ್ಯಾಕಿಂಗ್ ಸಿಸ್ಟಂ) ಮೂಲಕ ಅರ್ಜಿಯನ್ನು ಡಿಸೆಂಬರ್ 31 ರವರೆಗೆ ಸಲ್ಲಿಸಬಹುದು.
ಮೆಟ್ರಿಕ್ಪೂರ್ವ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಎಸ್ಎಟಿಎಸ್ ನೊಂದಿಗೆ ಸರಿಯಾಗಿ ತಾಳೆಯಾಗದ ಕಾರಣ ಹಿಂದಿನ ಸಾಲುಗಳಲ್ಲಿ ಸಲ್ಲಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಆಗಿರದೇ ಇರುವ ಕಾರಣ 2022-23 ನೇ ಸಾಲಿನಲ್ಲಿ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು.
2021-22 ಮತ್ತು ಹಿಂದಿನ ಸಾಲುಗಳಲ್ಲಿ ಹಲವಾರು ಕಾರಣಗಳಿಂದ ಪಾವತಿಯಾಗದೇ ಬಾಕಿ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಲು ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಆಧಾರ್ ಸೀಡ್ ಆದರೆ ಮಾತ್ರ ವಿದ್ಯಾರ್ಥಿಯು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ಬ್ಯಾಂಕ್ ಖಾತೆಯನ್ನು ಹೊಂದಿರದೇ ಇರುವ ವಿದ್ಯಾರ್ಥಿಗಳು ಹತ್ತಿರದ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟಲ್ ಪೇಮೆಂಟ್ಸ್ ಬ್ಯಾಂಕ್ನಲ್ಲಿ ಖಾತೆ ತೆರೆಯುವುದು.
ಹೆಚ್ಚಿನ ಮಾಹಿತಿಗೆ ದೂ.ಸಂ: 08182-249241 ನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪೋಷಕರೇ ಎಚ್ಚರ ; ಮಕ್ಕಳಲ್ಲಿ ಈ ‘ಲಕ್ಷಣ’ಗಳು ಕಾಣಿಸಿಕೊಂಡ್ರೆ, ತಡ ಮಾಡದೇ ತಜ್ಞರ ಸಂಪರ್ಕಿಸಿ.!