ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತ್ಯೇಕ ಬಸ್ ಯಾತ್ರೆಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದು, ಒಂದೇ ಬಸ್ ನಲ್ಲಿ ತೆರಳುವಂತೆ ಸೂಚನೆ ನೀಡಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಸ್ ಯಾತ್ರೆ ಜೊತೆಗೇ ದಕ್ಷಿಣ ಕರ್ನಾಟಕದಲ್ಲಿ ಬಸ್ ಯಾತ್ರೆಗೆ ಸಿದ್ಧತೆ ಕೈಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಬಸ್ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಸಲು ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದೆ. ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪ್ರತ್ಯೇಕ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಪ್ರತ್ಯೇಕ ರ್ಯಾಲಿ ಹೊರಟರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೈಕಮಾಂಡ್ ನಿರ್ಧರಿಸಿ ಪ್ರತ್ಯೇಕ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
BIGG NEWS : ಇ-ಸಿಗರೇಟ್ ಮಾರಾಟ ಮಾಡಬಾರ್ದು ; ‘ಇ-ಸಿಗರೇಟ್ ಮಾರಾಟ’ ನಿಷೇಧಿಸುವ ಕಾನೂನು ಅನುಸರಣೆಗೆ ಹೈಕೋರ್ಟ್ ಆದೇಶ