ಬೆಂಗಳೂರು : ಯಾರನ್ನೂ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಸಲು ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದೆ. ಸಭೆ ಬಳಿಕ ಹೈಕಮಾಂಡ್ ಹಲವು ವಿಚಾರಕ್ಕೆ ಬ್ರೇಕ್ ಹಾಕಿದೆ. ಯಾರನ್ನೂ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ,ಚುನಾವಣೆ ಬಳಿಕ ಸಿಎಂ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇವೆ, ಅಲ್ಲಿವರೆಗೂ ಈ ಬಗ್ಗೆ ಚರ್ಚೆ ಬೇಡ ಎಂದು ಹೈಕಮಾಂಡ್ ತೆರೆ ಎಳೆದಿದೆ.
ಇನ್ನೂ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತ್ಯೇಕ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಸ್ ಯಾತ್ರೆ ಜೊತೆಗೇ ದಕ್ಷಿಣ ಕರ್ನಾಟಕದಲ್ಲಿ ಬsಸ್ ಯಾತ್ರೆಗೆ ಸಿದ್ಧತೆ ಕೈಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಬಸ್ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ನಾವೆಲ್ಲರೂ ಒಟ್ಟಿಗೆ ಬಸ್ ಯಾತ್ರೆಯಲ್ಲಿ ಭಾಗಿಯಾಗುತ್ತೇವೆ ಎಂದು ಸಿದ್ದರಾಮಯ್ಯ ಕೂಡ ಸ್ಪಷ್ಟನೆ ನೀಡಿದ್ದಾರೆ.
BIGG NEWS : ಗ್ರಾ.ಪಂ ಸದಸ್ಯರ ವೇತನ 10 ಸಾವಿರಕ್ಕೆ ಹೆಚ್ಚಿಸಲು ಆಗ್ರಹ : ಬೆಂಗಳೂರಿನಲ್ಲಿ ಪ್ರತಿಭಟನೆ
‘ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸಬರಿಗೆ ಅವಕಾಶ ನೀಡಬೇಕು’ : ಬಸನಗೌಡ ಪಾಟೀಲ್ ಯತ್ನಾಳ್