ಬೆಳಗಾವಿ : ಇಲ್ಲಿನ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ 30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕೆ ಸದಸ್ಯರ ಹಾಜರಿ ಕಡ್ಡಾಯವಾಗಿದೆ.
ನಗರದ ಸುವರ್ಣ ಸೌಧದಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಶಾಸಕರ, ಸಚಿವರ ಹಾಜರಾತಿ ಕಡ್ಡಾಯಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಈ ಅಧಿವೇಶನದಲ್ಲಿ ಬೆಂಗಳೂರು ಭೂ ಸುಧಾರಣೆ ಕಾಯಿದೆ, ಕನ್ನಡ ಸಮಗ್ರ ಅಭಿವೃದ್ದಿ ವಿಧೇಯಕಗಳನ್ನು ಮಂಡಿಸಲಾಗಿದ್ದು. ಅದರ ಬಗ್ಗೆ ಚರ್ಚೆ ನಡೆಯಲಿದೆ. ಹಾಗೂ ಗಡಿ ಪ್ರದೇಶ ಅಭಿವೃದ್ದಿ ವಿಧೇಯಕ ಸೇರಿ ಆರು ಹೊಸ ವಿಧೇಯಕಗಳನ್ನು ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಅದೇ ರೀತಿ ಅಧಿವೇಶನಕ್ಕೆ ಹೋಗಲ್ಲ, ಅಲ್ಲೇನಿದೆ ಎಂಬ ಶಾಸಕರು ಹೇಳಿಕೆ ನೀಡಿರುವುದು ಗಮನಕ್ಕೆ ಬಂದಿದೆ. . ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು. ನಾನು ಅದನ್ನು ಸಹಿಸುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯಲಿದ್ದು 6 ವಿಧೇಯಕ ಮಂಡನೆಗೆ ಸರ್ಕಾರ ನಿರ್ಧರಿಸಿದ್ದು, ಚಳಿಗಾಲದ ಅಧವೇಶನದಲ್ಲಿ ಸರ್ಕಾರ ಯಾವೆಲ್ಲಾ ವಿಧೇಯಕಕ್ಕೆ ಮಂಡನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.ಡಿ.19 ರಿಂದ 30 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ.
BIGG NEWS : ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
BIGG NEWS : ರಾಜ್ಯದಲ್ಲಿ ಹೆಚ್ಚಾದ ಚಳಿಯ ವಾತಾವರಣ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ