ಚಾಮರಾಜನಗರ : ಸಿಎಂ ಬಸವರಾಜ ಬೊಮ್ಮಾಯಿ ಇಂದು ಮತ್ತೆ ಚಾಮರಾಜನಗರ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಮಂಡ್ಯದಲ್ಲಿ ಉದ್ಯೋಗ ಮೇಳ ಆಯೋಜನೆ |JOB FAIR
ಚಾಮರಾಜನಗರಕ್ಕೆ ಭೇಟಿ ನೀಡಿದರ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಬದಿಗೊತ್ತಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುನ್ನ ಸಿಎಂ ಬೊಒಮ್ಮಾಯಿ ಅವರು 2021 ರ ಅ.7 ರಂದು ಚಾಮರಾಜನಗರಕ್ಕೆ ಭೇಟಿ ನೀಡಿ, ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟಿಸಿದ್ದರು. ಇಂದು ಮತ್ತೆ ಎರಡನೇ ಬಾರಿಗೆ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಲಿರುವ ಸಿಎಂ ಬೊಮ್ಮಾಯಿ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಮೂಢನಂಬಿಕೆ ಹಿನ್ನೆಲೆಯಲ್ಲಿ ವೀರೇಂದ್ರ ಪಾಟೀಲರ ಬಳಿಕ 16 ವರ್ಷಗಳ ಕಾಲ ಯಾವ ಮುಖ್ಯಮಂತ್ರಿಯೂ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ.