ರಾಯಚೂರು: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳಿಗೆ ಝಿಕಾ ವೈರಸ್ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.
ರಾಯಚೂರಿನಲ್ಲಿ ಝಿಕಾ ವೈರಸ್ ಪತ್ತೆಯಾದ ಹಿನ್ನೆಲೆ ಜಿಲ್ಲಾಡಳಿತ ಅಲರ್ಟ್ ಆಗಿದ್ದು, ವೈರಸ್ ಪತ್ತೆಯಾದ 5 ಕಿಮೀ ಸುತ್ತಮುತ್ತದಲ್ಲಿನ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಸದ್ಯ, ಮಾನ್ವಿಯಲ್ಲೇ ಕೇಂದ್ರದ ವೈದ್ಯರ ತಂಡ ಮೊಕ್ಕಾಂ ಹೂಡಿದ್ದು, ಬಾಲಕಿ ಹಾಗೂ ಕುಟುಂಬಸ್ಥರ ಜೊತೆ ನಿರಂತರ ಸಂಪರ್ಕದಲ್ಲಿದೆ. ಮಾನವಿ ತಾಲೂಕಿನ ಕೋಳಿ ಕ್ಯಾಂಪ್ನಲ್ಲಿ ಈ ವೈರಸ್ ಪತ್ತೆಯಾಗಿದೆ.ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಾಗರಾಜ ಅವರ ಪುತ್ರಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ.ಕೆಲ ದಿನಗಳ ಹಿಂದೆ ಬಾಲಕಿಗೆ ಜ್ವರ ನೆಗಡಿ ಕೆಮ್ಮು, ಸೇರಿದಂತೆ ಅನಾರೋಗ್ಯ ಉಂಟಾಗಿತ್ತು. ಈ ವೇಳೆ, ಪೋಷಕರು ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆಗಾಗಿ ತೋರಿಸಿದ್ದರು. ಅಲ್ಲಿನ ವೈದ್ಯರು ಸಿಂಧನೂರಿಗೆ ಚಿಕಿತ್ಸೆಗೆ ತೆರಳುವಂತೆ ಹೇಳಿದ್ದರು. ಈ ವೇಳೆ, ಬಾಲಕಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದ್ದು, ಡೆಂಗ್ಯೂ ಮಾದರಿಯ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ.
ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ : ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಹತ್ಯೆಗೆ ಯತ್ನ
BIGG NEWS: ಹಾಸನದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಕಾಮುಕರು ಪೊಲೀಸರ ವಶಕ್ಕೆ