ಮೈಸೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಗಡಿ ವಿವಾದದ ಕುರಿತು ಸಿಎಂ ಬೊಮ್ಮಾಯಿ ಸುದ್ದಿಗಾರರ ಜೊತೆ ಮಾತನಾಡಿದ್ದು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ, ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಕೂಡ ಚರ್ಚೆ ನಡೆಸಲಿದ್ದೇನೆ ಎಂದರು.
ಬೆಳಗಾವಿ ಗಡಿ ವಿವಾದದ ಕುರಿತು ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕಾನೂನು ನಿಯಮಗಳನ್ನು ಗೃಹ ಸಚಿವರ ಮುಂದಿಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.ಸಿಎಂ ಬೊಮ್ಮಾಯಿ ಇಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದು, ಇದು ನನ್ನ ಮೂರನೇ ಭೇಟಿ, ಇದರಲ್ಲೇನು ವಿಶೇಷವಿಲ್ಲ ಎಂದು ಹೇಳಿದರು.