ನವದೆಹಲಿ: ಇಂದು ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆ ಅರುಣಾಚಲ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆ ವಿಚಾರದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದವು. ಈ ವೇಳೆ ತೀವ್ರ ಗದ್ದಲ ಉಂಟಾಗಿತ್ತು.
ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಮಾತನಾಡಿದ ರಾಜನಾಥ್ ಸಿಂಗ್, ಅರುಣಾಚಲ ಪ್ರದೇಶದಲ್ಲಿ ಚೀನಾದೊಂದಿಗಿನ ಇತ್ತೀಚಿನ ಘರ್ಷಣೆಯಲ್ಲಿ ಯಾವುದೇ ಭಾರತೀಯ ಸೈನಿಕನಿಗೆ ತೀವ್ರ ಗಾಯವಾಗಿಲ್ಲ ಅಥವಾ ಹುತಾತ್ಮರಾಗಿಲ್ಲ ಎಂದು ಹೇಳಿದರು.
ಇದಕ್ಕೂ ಮೊದಲು ಸಚಿವರು, ಘರ್ಷಣೆ ನಡೆದ ವಿಚಾರವಾಗಿ ಉನ್ನತ ಮಟ್ಟದ ಸಭೆಗೆ ಕರೆ ನಡೆಸಿದ್ದರು. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ವಾಯುಪಡೆ ಮತ್ತು ನೌಕಾಪಡೆಯ ಹಿರಿಯ ಕಮಾಂಡರ್ಗಳು ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.
ನಿನ್ನೆ ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಈ ಗುಂಡಿನ ಚಕಮಕಿಯಲ್ಲಿ ಉಭಯ ದೇಶಗಳ ಸೈನಿಕರು ಗಾಯಗೊಂಡಿದ್ದರು.
ಬೆಳಗಾವಿ ಗಡಿ ವಿವಾದ : ನಮ್ಮ ನಿಲುವನ್ನು ಕೇಂದ್ರದ ಮುಂದೆ ತಿಳಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ