ನವದೆಹಲಿ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (NCP )ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಜೀವ ಬೆದರಿಕೆ (Death Threat) ಹಾಕಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪರಿಚಿತ ವ್ಯಕ್ತಿಯೋರ್ವ ಸಿಲ್ವರ್ ಓಕ್ನಲ್ಲಿರುವ ಶರದ್ ಪವಾರ್ ಅವರಿಗೆ ಕರೆ ಮಾಡಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಸಂಸದರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
An unidentified person called up NCP President Sharad Pawar's residence at Silver Oak & threatened to kill him. A case has been registered against an unidentified person. Police registered a case under section 294,506(2) of IPC and started further investigation: Mumbai Police
— ANI (@ANI) December 13, 2022
ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294,506(2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
BIGG NEWS : ಹಾಸನದಲ್ಲಿ ಅಪ್ರಾಪ್ತ13 ವರ್ಷದ ಬಾಲಕಿ ಗರ್ಭಿಣಿ : ಅತ್ಯಾಚಾರ ಎಸಗಿದ್ದ ಮೂವರು ಕಾಮುಕರ ಬಂಧನ