ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹೊತ್ತಲ್ಲೇ ಮಹಾರಾಷ್ಟ್ರದ ಎನ್ ಸಿಪಿ ಶಾಸಕ ರೋಹಿತ್ ಪವಾರ್ ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ.
BIGG NEWS: ಮುರುಘಾ ಶ್ರೀ ಪೋಕ್ಸೋ ಕೇಸ್; ಜಾಮೀನು ಅರ್ಜಿ ವಿಚಾರಣೆ ಡಿ.16ಕ್ಕೆ ಮುಂದೂಡಿದ ಹೈಕೋರ್ಟ್
ರೋಹಿತ್ ಪವಾರ್ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್ಸಿಪಿ ಶಾಸಕರಾಗಿ ರೋಹಿತ್ ಪವಾರ್ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹೊತ್ತಲ್ಲೇ ಬೆಳಗಾವಿ ಭೇಟಿ ನೀಡಿದ್ದಾರೆ. ಗಡಿ ಉಸ್ತುವಾರಿ ಸಚಿವರ ಬೆಳಗಾವಿ ಭೇಟಿ ರದ್ದು ಖಂಡಿಸಿ ಮಹಾ ವಿಕಾಸ ಅಘಾಡಿ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ ರೋಹಿತ್ ಪವಾರ್ ಅವರಿಗೆ ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದು ರಾತ್ರೋರಾತ್ರಿ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ.
ಇನ್ನು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.