ಕಾರವಾರ: ಐತಿಹಾಸಿಕ ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ನೀತಿ ಜಾರಿ ಮಾಡುವಂತೆ ಹಿಂದೂ ಪರ ಸಂಘಟನೆಗಳು ಮನವಿ ಮಾಡಿವೆ.
ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ನಂತರ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ ವಸ್ತ್ರ ಸಂಹಿತಿ ನೀತಿ ಜಾರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇದೀಗ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನಲ್ಲಿರುವ ಮುರುಡೇಶ್ವರ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ ನೀತಿ ಜಾರಿ ಮಾಡುವಂತೆ ದೇವಸ್ಥಾನ ಆಡಳಿತ ಮಂಡಳಿಗೆ ಮನವಿ ಮಾಡಲಾಗಿದೆ.
ಪಾಶ್ಚಾತ್ಯ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಒಳ ಪ್ರವೇಶ ನೀಡಬಾರದು. ಭಾರತೀಯ ಸಂಪ್ರದಾಯಿಕ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕೊಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ.
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪುರುಷರಿಗೆ ಪಂಜೆ, ಶಲ್ಯ ಕಡ್ಡಾಯ ಮಾಡಿದರೆ, ಮಹಿಳೆಯರಿಗೆ ಸೀರೆ ಕಡ್ಡಾಯ ಮಾಡಿತ್ತು.