ಚಿತ್ರದುರ್ಗ: ಮುರುಘಾ ಶ್ರೀಗಳ ( Murugha Sri ) ವಿರುದ್ಧ ದಾಖಲಾಗಿದ್ದಂತ ಪೋಸ್ಕೋ ಪ್ರಕರಣದಲ್ಲಿ, ಮತ್ತೆ ನ್ಯಾಯಾಲಯವು, ಡಿಸೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ.
ಇಂದು ಪೋಸ್ಕೋ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿರುವಂತ ಎ.1 ಆರೋಪಿ ಮುರುಘಾ ಮಠದ ( Murugha Matt ) ಡಾ.ಶಿವಮೂರ್ತಿ ಶಿವಶರಣರು, ಎ2 ಆರೋಪಿ ವಾರ್ಡನ್ ರಶ್ಮಿ ಹಾಗೂ ಎ4 ಆರೋಪಿ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು.
ಈ ಹಿನ್ನಲೆಯಲ್ಲಿ ಮೂವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು, ಮುರುಘಾ ಶ್ರೀ ಸೇರಿದಂತೆ ಮೂವರು ಆರೋಪಿಗಳಿಗೆ ಡಿಸೆಂಬರ್ 15ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.
ಇನ್ನೂ ಮತ್ತೊಂದೆಡೆ ಇಂದು ರಾಜ್ಯ ಸರ್ಕಾರದಿಂದ ಮುರುಘಾ ಮಠದ ಟ್ರಸ್ಟ್ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
BIGG NEWS: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆ; ಮತ್ತೆ ಹೆಚ್ಚಾದ ರಸ್ತೆಗುಂಡಿಗಳು, ವಾಹನ ಸವಾರರ ಪರದಾಟ