ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆ, ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿ ಒಳನಾಡು, ಕರಾವಳಿಯಲ್ಲಿ ಈಗಾಗಲೇ ಹೆಚ್ಚು ಮಳೆಯಾಗಿದೆ. ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ, ಮಿಂಡಿನೊಂದಿಗೆ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಅಂದಹಾಗೇ ಮಾಂಡೌಸ್ ಚಂಡಮಾರುತದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರು ಜಿಲ್ಲೆಯಲ್ಲಿ ಮಳೆಯಿಂದ ಈವರೆಗೆ 212 ಎಕರೆ ರೈತರ ಬೆಳೆ ನಾಶವಾಗಿದೆ. ಟೊಮ್ಯಾಟೋ, ಆಲೂಗಡ್ಡೆ, ಹೂ ಸೇರಿದಂತೆ ಹಲವು ಬೆಳೆ ನಾಶವಾಗಿರೆದ. ಇದಲ್ಲದೇ ವಿವಿಧ ರೋಗಗಳ ಭಾಧೆ ಕೂಡ ಆರಂಭಗೊಂಡಿದೆ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ.