ಬೆಂಗಳೂರು : 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದ್ದು, ಹಗರಣದಲ್ಲಿ ಬಂಧಿತರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ.
BIG NEWS : ʻಜಿಕಾ ವೈರಸ್ʼ ವಿರುದ್ಧ ಹೋರಾಡಲು ಭಾರತ ಸಿದ್ಧವಾಗಿರಬೇಕು: ಎನ್ಟಿಜಿಐ ಮುಖ್ಯಸ್ಥ ಡಾ ಎನ್ಕೆ ಅರೋರಾ ಕರೆ
ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ಇದೀಗ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿ ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದೆ. ವಿಜಯಪುರ ಜಿಲ್ಲೆಯ ಕಪನಿಂಬರಗಿ ಜಿಎಚ್ಎಸ್ ಶಾಲೆಯ ಪ್ರತಾಪ್ ಸಿಂಗ್,ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿಜಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊರಟಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ. ಯೋಗೇಶ್ವರಪ್ಪ, ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಸೋಮನಗೌಡ ಪಾಟೀಲ್ ಬಂಧಿರಾಗಿದ್ದಾರೆ.
ಸದ್ಯ ಬಂಧಿತರನ್ನು ವಿಚಾರಣೆ ನಡೆಸಲಾಗಿದ್ದು, ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಬಳಿಕ ನ್ಯಾಯಾಲಯದ ಮುಂದೆ ಆರೋಪಿ ಶಿಕ್ಷಕರನ್ನು ಹಾಜರುಪಡಿಸಿರುವ ಕೋರ್ಟ್ ಆದೇಶದ ಮೇರೆಗೆ ಸಿಐಡಿ ಅಧಿಕಾರಿಗಳು ಬಂಧಿತ ಶಿಕ್ಷಕರನ್ನು ಕಾರಾಗೃಹಕ್ಕೆ ಕಳುಹಿಸಿದ್ದಾರೆ.
BIGG NEWS : ಅಕ್ರಮ-ಸಕ್ರಮ : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ